Saturday, May 31, 2025

Covid-9: ಕೋವಿಡ್ - 19 : ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ.

  ISARESOURCEINFO       Saturday, May 31, 2025
Covid-9: ಕೋವಿಡ್ - 19 : ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ.



ಪ್ರಸ್ತುತ, ರಾಜ್ಯದ ಕೋವಿಡ್ 19 ಪರಿಸ್ಥಿತಿ ಹಾಗೂ ಜೂನ್ ತಿಂಗಳಿನಲ್ಲಿ ಶಾಲೆಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಕೆಳಕಂಡ ಸೂಚನೆಗಳನ್ನು ನೀಡಲಾಗಿದೆ.

1. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ, ಸೂಕ್ತ ಚಿಕಿತ್ಸೆ ಹಾಗೂ ಆರೈಕಾ ಕ್ರಮಗಳನ್ನು ಪಾಲಿಸುವುದು.

2. ಸದರಿ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸುವುದು.

3. ಜ್ವರ, ಕೆಮ್ಮು ನೆಗಡಿ ಹಾಗೂ ಇತರ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಲ್ಲಿ, ಪೋಷಕರಿಗೆ ಮಾಹಿತಿಯನ್ನು ನೀಡಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸುವುದು.

4. ಮುಂದುವರೆದು, ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು. ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸುವುದು.

5. ಆದಾಗ್ಯೂ, ಮಂಜಾಗ್ರತಾ ಕ್ರಮಗಳಾದ ಕೈಗಳ ಸ್ವಚ್ಛತೆ, Cough Etiquette ಇತ್ಯಾದಿ Covid 19 Appropriate Behaviour (CAB) ನ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು.

ಒಟ್ಟಾರೆಯಾಗಿ, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 19 ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.
logoblog

Thanks for reading Covid-9: ಕೋವಿಡ್ - 19 : ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ.

Previous
« Prev Post