TEACHER TRANSFER-2025: Final Weighted Marks of Teachers as of the end of December 2024 published in the software

  ISARESOURCEINFO      
TEACHER TRANSFER-2025: Final Weighted Marks of Teachers as of the end of December 2024 published in the software.


2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಜ್ ಅಂಕಗಳನ್ನು (Weighted Marks) ತಂತ್ರಾಂಶದಲ್ಲಿ ಪ್ರಕಟಿಸಿರುವ ಬಗ್ಗೆ,

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಮತ್ತು ಉಲ್ಲೇಖ 1 ಮತ್ತು 2 ರನ್ನಯ, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ /ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು, ಕರಡು ವೇಯ್ಯಡ್ ಅಂಕಗಳನ್ನು ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್ನಲ್ಲಿ ಹಾಗೂ ಇಲಾಖಾ ವೆಬ್‌ ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಅಲ್ಲದೇ ಉಲ್ಲೇಖ 5 ರಲ್ಲಿ ಇಇಡಿಎಸ್‌ನಲ್ಲಿ ಇಂದೀಕರಣಕ್ಕಾಗಿ ಈ ಹಿಂದೆ ಹಲವಾರು ಬಾರಿ ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ.


ವರ್ಗಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಗಳ ನಿರ್ವಹಿಸಬೇಕಾಗಿರುವುದರಿಂದ ಮತ್ತು ಈಗಾಗಲೇ ಇಇಡಿಎಸ್‌ನಲ್ಲಿ ಮಾಹಿತಿ ಇಂದೀಕರಣಕ್ಕಾಗಿ ಸಾಕಷ್ಟು ಕಾಲಾವಕಾಶವನ್ನು ನೀಡಿರುವುದರಿಂದ ಇನ್ನೂ ಮುಂದೆ ಇಇಡಿಎಸ್‌ನಲ್ಲಿ ಇಂದೀಕರಣ / ತಿದ್ದುಪಡಿ / ಬದಲಾವಣೆಯನ್ನು ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ. 


ಅಂತಿಮವಾಗಿ ಪ್ರಕಟಿಸಲ್ಪಟ್ಟ ಸೇವಾ ಅಂಕಗಳನ್ನೇ ಪ್ರಸಕ್ತ ಸಾಲಿನಲ್ಲಿ ನಡೆಯುವ ವರ್ಗಾವಣೆಯ ಎಲ್ಲಾ ಪುಕ್ರಿಯೆಗಾಗಿ ಪರಿಗಣಿಸಲಾಗುವುದೆಂದು ತಿಳಿಸಲಾಗಿದೆ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ ಅಂತಿಮ ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್ ಕ್ಷೇತ್ರಶಿಕ್ಷಣಾಧಿಕಾರಿಗಳ /ಉಪನಿರ್ದೇಶಕರ ಲಾಗಿನ್ ಹಾಗೂ ಇಲಾಖಾ ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸದರಿ ಮಾಹಿತಿಯನ್ನು ಎಲ್ಲಾ ಶಿಕ್ಷಕರಿಗೆ ತಲುಪಿಸಲು ಕ್ರಮವಹಿಸುವಂತೆ ಇಲಾಖೆಯ ಎಲ್ಲಾ ಕಛೇರಿಯ ಮುಖ್ಯಸ್ಥರಿಗೆ ಕೋರಿದೆ.


ಶಿಕ್ಷಕರು ತಮ್ಮ  ಸೇವಾ ಅಂಕಗಳನ್ನು (weighted score) ಇದೀಗ ಚೆಕ್ ಮಾಡಿಕೊಳ್ಳಿ 


CLICK HERE TO CHECK WEIGHTED SCORE


logoblog

Thanks for reading TEACHER TRANSFER-2025: Final Weighted Marks of Teachers as of the end of December 2024 published in the software

Previous
« Prev Post

No comments:

Post a Comment