Tuesday, September 23, 2025

KSCBC SURVEY-2025: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ - ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025 ಯಲ್ಲಿ ಈ ಅಪ್ಲಿಕೇಶನ್ ಇರಲೇಬೇಕು

  ISARESOURCEINFO       Tuesday, September 23, 2025
KSCBC SURVEY-2025: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ - ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025 ಯಲ್ಲಿ ಈ ಅಪ್ಲಿಕೇಶನ್ ಇರಲೇಬೇಕು.



ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದಿರುವಿಕೆಯನ್ನು ಗುರುತಿಸಲು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳಿಗೆ ಸಂಬಂಧಪಟ್ಟಂತೆ ನಂಬಲರ್ಹ, ವಿಶ್ವಾಸಾರ್ಹ ಹಾಗೂ ನಿಖರ ಅಂಕಿ-ಅಂಶಗಳನ್ನೊಳಗೊಂಡ ಮಾಹಿತಿಯ ಅವಶ್ಯಕತೆ ಇರುತ್ತದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇದೇ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ರಾಜ್ಯಾದ್ಯಂತ ಸಮಗ್ರ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.

ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಹಯೋಗದೊಂದಿಗೆ ವಿಸ್ತ್ರತ ಸಮೀಕ್ಷೆಯನ್ನು ನಡೆಸಲು ಸಿದ್ಧತೆಗಳನ್ನು ಮಾಡಿಕೊಂಡು. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ ಕುಟುಂಬಗಳು ಹಾಗೂ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಪ್ರಾತಿನಿಧ್ಯ ಇತ್ಯಾದಿ ಸ್ಥಿತಿಗತಿಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ಮಾಹಿತಿಗಳು ದುರ್ಬಲ ವರ್ಗಗಳಿಗೆ ಮೀಸಲಾತಿ ಒದಗಿಸುವಲ್ಲಿ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವುದಕ್ಕಾಗಿ ಇತರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ದಿಶೆಯಲ್ಲಿ ಸಹಾಯಕವಾಗುತ್ತವೆ. ಇದಕ್ಕಾಗಿ, ರಾಜ್ಯದ ಎಲ್ಲಾ ಜನರು ತಮಗೆ ಸಂಬಂಧಿಸಿದ ಮಾಹಿತಿಗಳನ್ನು ಸರಿಯಾಗಿ ಹಾಗೂ ವಸ್ತುನಿಷ್ಠವಾಗಿ ನೀಡುವುದು ಬಹಳ ಮುಖ್ಯವಾದ ಕಾರ್ಯವಾಗಿದೆ.

ಮಾಹಿತಿಗಳನ್ನು ಸಂಗ್ರಹಿಸುವುದಕ್ಕಾಗಿ ಆಯೋಗವು ನೇಮಿಸಿದ ಸಮೀಕ್ಷಕರು ಹಾಗೂ ಮೇಲ್ವಿಚಾರಕರು ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯುವ ಮೂಲಕ ಸಮೀಕ್ಷೆಯ ಗುರಿಯನ್ನು ಯಶಸ್ವಿಗೊಳಿಸುವುದು ಮುಖ್ಯವಾಗಿದೆ. ಆದ್ದರಿಂದ ಸಮೀಕ್ಷೆಗಾಗಿ ಈ ಕೆಳಗಿನ App install ಮಾಡಿಕೊಳ್ಳುವುದು ಅವಶ್ಯ.

ಗಣತಿದಾರರು ಈ  appsಗಳನ್ನು ಬಳಸಬೇಕಾಗುತ್ತದೆ.





ಈ ನಾಲ್ಕು App ಪ್ರಮುಖ ಕಾರ್ಯಗಳು.
 
 ▪️1ನೇ app ಸರ್ವೆ ಮಾಡಲು
 ▪️2ನೇ app,UHID ಮನೆಗಳ G. P. S ಲೊಕೇಶನ್ ತೋರಿಸಲು, 
 ▪️3 ಮತ್ತು 4ನೇ APPSಗಳು ಆಧಾರ್ face captureಗೇ ಬೇಕಾಗುತ್ತದೆ.

logoblog

Thanks for reading KSCBC SURVEY-2025: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ - ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025 ಯಲ್ಲಿ ಈ ಅಪ್ಲಿಕೇಶನ್ ಇರಲೇಬೇಕು

Newest
You are reading the newest post