Friday, September 26, 2025

KSCBC SURVEY-2025: ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಆಯೋಗದ ಠೇವಣಿ ಖಾತೆಯಿಂದ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ

  ISARESOURCEINFO       Friday, September 26, 2025
KSCBC SURVEY-2025: ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಆಯೋಗದ ಠೇವಣಿ ಖಾತೆಯಿಂದ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ




ಪ್ರಸ್ತಾವನೆ :

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025 ರಿಂದ 07.10.2025ರ ವರೆಗೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಿದ್ದು, ಸಮೀಕ್ಷೆಯ ಕಾರ್ಯ ಪ್ರಗತಿಯಲ್ಲಿದೆ.

ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಆರ್ಥಿಕ ಇಲಾಖೆಯಿಂದ ಪೂರಕ ಆಯವ್ಯಯ-2 ರಲ್ಲಿ ಅನುದಾನ ಒದಗಿಸುವ ಷರತ್ತುಗಳಿಗೆ ಒಳಪಟ್ಟು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ನಿಗಮಗಳ ಪಿ.ಡಿ. ಖಾತೆಗಳಲ್ಲಿ ಲಭ್ಯವಿರುವ ರೂ.348.36 ಕೋಟಿಗಳನ್ನು ಸಮೀಕ್ಷೆಯ ಉದ್ದೇಶಕ್ಕೆ ಬಳಸಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಲಾಗಿದೆ.

ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ದಿನಾಂಕ:22.09.2025 ರಿಂದ 07.05.2025ರ ವರೆಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.


ಸರ್ಕಾರದ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸೂಚನೆಯನ್ವಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಮೊದಲನೇ ಕಂತಿನಲ್ಲಿ ಗೌರವಧನ ತಲಾ ರೂ.5000/- ಗಳಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 60,36,40,000/- (ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಆದೇಶ.

ಆದೇಶದ ವಿವರ ಈ ಕೆಳಗೆ ನೀಡಲಾಗಿದೆ: 

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಅನುಬಂಧದಲ್ಲಿ ವಿವರಿಸಿರುವಂತೆ ಮೊದಲನೇ ಕಂತಿನಲ್ಲಿ ಗೌರವಧನ ತಲಾ ರೂ.5000/- ಗಳಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 60,36,40,000/-(ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು ಮಾತ್ರ) ಗಳನ್ನು ಸಮೀಕ್ಷಾ ಉದ್ದೇಶಕ್ಕಾಗಿ ನಿಗಮಗಳಿಂದ ಆಯೋಗದ ಠೇವಣಿ ಖಾತೆ ಲೆಕ್ಕ ಶೀರ್ಷಿಕೆ ಸಂಖ್ಯೆ: 8449-00-120-0-18-677 ಹಾಗೂ ಠೇವಣಿ ಸಂಖ್ಯೆ: 265724010 ಗೆ ವರ್ಗಾವಣೆ ಮಾಡಿರುವ ಅನುದಾನದಿಂದ ಜಿಲ್ಲಾಧಿಕಾರಿಗಳ ಹೆಸರಿನಲ್ಲಿರುವ ಪಿ.ಡಿಖಾತೆ/ಬ್ಯಾಂಕ್ ಖಾತೆಗೆ ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ.

1. ಈ ಅನುದಾನವನ್ನು ಸಮೀಕ್ಷಾದಾರರಿಗೆ ತಲಾ ರೂ.5,000 ರಂತೆ ಮೊದಲನೇ ಕಂತಿನ ಗೌರವಧನ ನೀಡಲು ಬಳಕೆ ಮಾಡುವುದು. ಉಳಿದ ಅನುದಾನವನ್ನು ಮುಂದಿನ ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು.

2. ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.



logoblog

Thanks for reading KSCBC SURVEY-2025: ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಆಯೋಗದ ಠೇವಣಿ ಖಾತೆಯಿಂದ ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ

Previous
« Prev Post