Friday, October 10, 2025

Alva’s: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ: 2026-27ನೇ ಸಾಲಿನ 6ರಿಂದ 9ನೇ ತರಗತಿಗೆ ಉಚಿತ ಶಿಕ್ಷಣ ಯೋಜನೆ, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಅವಕಾಶ.

  ISARESOURCEINFO       Friday, October 10, 2025
Alva’s: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ: 2026-27ನೇ ಸಾಲಿನ 6ರಿಂದ 9ನೇ ತರಗತಿಗೆ ಉಚಿತ ಶಿಕ್ಷಣ ಯೋಜನೆ, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಅವಕಾಶ.


ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 6, 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣದ ಅವಕಾಶ ಲಭ್ಯವಿದೆ. ಈ ತರಗತಿಗಳಿಗೆ ಪ್ರವೇಶ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ, ಪ್ರವೇಶಾತಿ ಪ್ರಕ್ರಿಯೆಯ ಭಾಗವಾಗಿರುವ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕು. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಗಮನಿಸಬೇಕಾದ ಮುಖ್ಯ ಸೂಚನೆಗಳು:

1. ಪ್ರಸ್ತುತ 6, 7, 8, ಮತ್ತು 9ನೇ ತರಗತಿಗಳಿಗೆ ವಿದ್ಯಾರ್ಥಿ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಕಡ್ಡಾಯವಾಗಿ ಮತ್ತು ಪೂರ್ಣವಾಗಿ ಭರ್ತಿ ಮಾಡುವುದು. ಅರ್ಜಿ ಇಲ್ಲದೆ ನೇರವಾಗಿ ಪರೀಕ್ಷೆ ಬರೆಯಲು ಯಾರಿಗೂ ಅವಕಾಶ ನೀಡಲಾಗುವುದಿಲ್ಲ. ಪರೀಕ್ಷೆಯು ದಿನಾಂಕ 01 ಮಾರ್ಚ್ 2026 ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಮತ್ತು ಪುತ್ತಿಗೆ ಕ್ಯಾಂಪಸ್‌ನ ವಿವಿಧ ಬ್ಲಾಕ್‌ಗಳಲ್ಲಿ ನಡೆಯಲಿದೆ.

2. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿಯ ಎಸ್.ಎ.ಟಿ.ಎಸ್ (ಶಾಲಾ ಮುಖ್ಯಸ್ಥರಿಂದ ಖಚಿತಪಡಿಸಿಕೊಂಡು) ಹಾಗೂ ಆಧಾರ್ ಸಂಖ್ಯೆಯನ್ನು ನಮೂದಿಸುವುದು, ಅರ್ಜಿಯೊಂದಿಗೆ ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ (3:4) ಅಳತೆಯ ಭಾವಚಿತ್ರವನ್ನು ನಿಗದಿತ ಸ್ಥಳದಲ್ಲಿ JPEJ (256kb) ಮಾದರಿಯಲ್ಲಿ ಲಗತ್ತಿಸುವುದು. ಆಧಾ‌ರ್ ಹಾಗೂ ಇನ್ನಿತರ ಶಾಲೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕಿಲ್ಲ..

3. ಒಂದೇ ವಿದ್ಯಾರ್ಥಿಯು ಪದೇ ಪದೇ ಅರ್ಜಿ ಹಾಕಲು / ಅರ್ಜಿಯಲ್ಲಿ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ.

4. 4. a) ಕ್ರೀಡಾ ವಿಭಾಗದಲ್ಲಿ ಆಯ್ಕೆ ಬಯಸುವ ವಿದ್ಯಾರ್ಥಿಗಳು ವೈಯಕ್ತಿಕ ಅಥವಾ ಗುಂಪು ಸ್ಪರ್ಧೆಗಳಲ್ಲಿ ಜಿಲ್ಲಾ/ರಾಜ್ಯ/ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು, b) ಸಾಂಸ್ಕೃತಿಕ ವಿಭಾಗದಲ್ಲಿ ಆಯ್ಕೆ ಬಯಸುವ ವಿದ್ಯಾರ್ಥಿಗಳು ಶಾಸ್ತ್ರೀಯ (ಸೀನಿಯರ್/ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು) / ಜಾನಪದ /ಯೋಗ / ಮಲ್ಲಕಂಬ ವಿಭಾಗದಲ್ಲಿ ಆಯ್ಕೆ ಬಯಸುವ ವಿದ್ಯಾರ್ಥಿಗಳು ಜಿಲ್ಲಾ / ರಾಜ್ಯ / ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಪ್ರಮಾಣ ಪತ್ರದೊಂದಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು

5. ಪ್ರಸ್ತುತ ವಿದ್ಯಾರ್ಥಿಗಳು ಯಾವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೋ, ಅದರ ಮುಂದಿನ ತರಗತಿಗೆ ಆಯ್ಕೆ ಬಯಸುವುದರಿಂದ ಪ್ರಸ್ತುತ ಓದುತ್ತಿರುವ ಎಲ್ಲಾ ವಿಷಯಗಳಲ್ಲಿ ಹಾಗೂ ಮಾನಸಿಕ ಸಾಮರ್ಥ್ಯ ವಿಷಯಗಳನ್ನು ಅಧ್ಯಯನ ಮಾಡಬೇಕು.

6. 6, 7, 8ನೇ ಮತ್ತು 9ನೇ ತರಗತಿಗಳಿಗೆ 2.30 ನಿಮಿಷದ 150 ಅಂಕಗಳ ಓ.ಎಮ್.ಆರ್ ಆಧಾರಿತ ಪ್ರಶ್ನೆ ಪತ್ರಿಕೆ ಇರುತ್ತದೆ. ಪರೀಕ್ಷೆಯು ಪೂರ್ವಾಹ್ನ 10.00 ಗಂಟೆಗೆ ಪ್ರಾರಂಭವಾಗಲಿದ್ದು 12.30ಕ್ಕೆ ಮುಗಿಯಲಿದೆ. ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 9.00ರ ಹೊತ್ತಿಗೆ ಹಾಜರಾಗುವುದು ಕಡ್ಡಾಯವಾಗಿದೆ.

7. ಪರೀಕ್ಷಾ ಕೇಂದ್ರದ ಮಾಹಿತಿ ನಿಮ್ಮ ಪ್ರವೇಶಪತ್ರದಲ್ಲಿ ನಮೂದಾಗಿದ್ದು ಅದೇ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆಯುವುದು. ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶವಿರುವುದಿಲ್ಲ. ಪರೀಕ್ಷೆ ಬರೆಯಲು ಪ್ರವೇಶಪತ್ರ ಕಡ್ಡಾಯವಾಗಿದೆ.

8. ಅರ್ಜಿಯನ್ನು ಪೂರ್ಣವಾಗಿ Onlineನಲ್ಲಿ ಭರ್ತಿ ಮಾಡಿ Submit ಆದ ಬಳಿಕ ಎರಡು ಪ್ರತಿಯನ್ನು ಪ್ರಿಂಟ್ ಮಾಡಿಕೊಳ್ಳುವುದು. ನಂತರದಲ್ಲಿ ಒಂದು ಪ್ರತಿ ಅರ್ಜಿಯನ್ನು ಸಂಸ್ಥೆಯ ವಿಳಾಸಕ್ಕೆ ಅಂಚೆ ಮೂಲಕ ತಪ್ಪದೇ ಕಳುಹಿಸುವುದು.

9. ಮೊದಲ ಹಂತದ ಆಯ್ಕೆ ಪ್ರಕ್ರಿಯೆಯು ಓ. ಎಮ್. ಆರ್ ಮಾದರಿಯಲ್ಲಿ ಇರಲಿದ್ದು, ಎರಡನೇ ಹಂತಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬರವಣಿಗೆ ಆಧಾರಿತ ಚಟುವಟಿಕೆಯನ್ನು ನಡೆಸಲಾಗಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಮರುದಿನ ನೇರ ಸಂದರ್ಶನದಲ್ಲಿ ಭಾಗವಹಿಸಿ ದಾಖಲಾತಿ ಮಾಡಿಕೊಳ್ಳುವುದು.

ಮಹತ್ವದ ದಿನಾಂಕಗಳು: 

▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 15, 2026

▪️ಪ್ರವೇಶ ಪತ್ರ ಮುದ್ರಣ ಮಾಡಿಕೊಳ್ಳುವ ದಿನಾಂಕ: ಫೆಬ್ರವರಿ 01, 2026

▪️ಪ್ರಥಮ ಹಂತದ ಆಯ್ಕೆ ಪ್ರಕ್ರಿಯೆ ದಿನಾಂಕ:ಮಾರ್ಚ್ 1, 2026

10. ಸಂಪರ್ಕ ಮಾಹಿತಿ:
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು:
📞 +91 70265 30137 / +91 70265 30263
⏰ ಸಮಯ: ಬೆಳಿಗ್ಗೆ 9.00 – ಸಂಜೆ 5.00


▪️ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು - CLICK HERE 

▪️ಅಧಿಕೃತ ವೆಬ್ಸೈಟ್ ವೀಕ್ಷಿಸಲು - CLICK HERE
logoblog

Thanks for reading Alva’s: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ: 2026-27ನೇ ಸಾಲಿನ 6ರಿಂದ 9ನೇ ತರಗತಿಗೆ ಉಚಿತ ಶಿಕ್ಷಣ ಯೋಜನೆ, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಅವಕಾಶ.

Newest
You are reading the newest post