▪️ ಮೈಸೂರಿನ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಹಾಗೂ ಪೂರಕ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ₹70 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ ಚಿ೦ತಾಮಣಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಮತ್ತು ಆಡಿಟೋರಿಯಂ ಕಾಮಗಾರಿಗಳನ್ನು ₹50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ನಿರ್ಧಾರ
▪️ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ 'ಇಂದಿರಾ ಆಹಾರ ಕಿಟ್‌ಗಳನ್ನು ವಿತರಿಸಲು ನಿರ್ಧಾರ.
▪️ ಆಯವ್ಯಯದಲ್ಲಿ ಘೋಷಿಸಿದಂತೆ ₹1,000 ಕೋಟಿ ವೆಚ್ಚದಲ್ಲಿ ಬೃಹತ್ ಸೇತುವೆಗಳ ನಿರ್ಮಾಣ ಮತ್ತು ₹1,000 ಕೋಟಿ ವೆಚ್ಚದಲ್ಲಿ ಪ್ರವಾಹದಿಂದ ಹಾನಿಗೀಡಾದ ಸೇತುವೆಗಳ ಪುನರ್ ನಿರ್ಮಾಣ ಹಾಗೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕಗಳ ನಿರ್ಮಾಣ ಮಾಡಲು ನಿರ್ಧಾರ
▪️ ಬೀದರ್ ಜಿಲ್ಲೆಯ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಘೋಷಿಸಲು ನಿರ್ಣಯ
▪️ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ ಕನಕಪುರದ ವೈದ್ಯಕೀಯ ಕಾಲೇಜು ಅನ್ನು 150 ಎ೦ಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಆರಂಭಿಸಲು ಮತ್ತು ಅವಶ್ಯವಿರುವ ವೈದ್ಯಕೀಯ ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ₹550 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
▪️ಜಲಾನಯನ ಅಭಿವೃದ್ಧಿ ಘಟಕ - ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0' ಯೋಜನೆಯಡಿ ರಾಜ್ಯದ 15 ತಾಲೂಕುಗಳ 39,413 ಹೆಕ್ಟೇರ್ ಪ್ರದೇಶದಲ್ಲಿ ₹90.07 ಕೋಟಿ ವೆಚ್ಚದಲ್ಲಿ ಹೆಚ್ಚುವರಿ 15 ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
▪️ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದ ಸೈಬರ್ ಭದ್ರತೆ ಬಲಪಡಿಸಲು 38.33 ಕೋಟಿ ವೆಚ್ಚದಲ್ಲಿ ಹೊಸ ತಂತ್ರಾಂಶ ಅಳವಡಿಕೆಗೆ ನಿರ್ಣಯ
▪️ನೋ೦ದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ₹405.55 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ತೀರ್ಮಾನ
▪️ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ 2025 ಅನ್ನು ಮುಂದಿನ ವಿಧಾನಮಂಡಲದಲ್ಲಿ ಮಂಡಿಸಲು ನಿರ್ಧಾರ.