Friday, October 17, 2025

DRAFT RULES: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025 ಕರಡು ನಿಯಮಗಳ ಅಧಿಸೂಚನೆ ಪ್ರಕಟ.

  ISARESOURCEINFO       Friday, October 17, 2025
DRAFT RULES: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025 ಕರಡು ನಿಯಮಗಳ ಅಧಿಸೂಚನೆ ಪ್ರಕಟ.


ಅಧಿಸೂಚನೆ

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967ನ್ನು ಈ ಮುಂದಿನಂತೆ ತಿದ್ದುಪಡಿ ಮಾಡಲು ಕರ್ನಾಟಕ ನಾಗರಿಕ ಸೇವೆಗಳು ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ ಕಲಂ 3 ಉಪ ಕಲಂ (1) ರೋಂದಿಗೆ ಓದಿಕೊಂಡ ಕಲಂ 8 ರಂತೆ ಪ್ರದತ್ತವಾದ ಅಧಿಕಾರದನ್ವಯ ಕರ್ನಾಟಕ ಸರ್ಕಾರವು ಉದ್ದೇಶಿಸಿದ್ದು, ಅದರಿಂದ ಬಾಧಿತರಾಗಲು ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ ಕಲಂ-3 ರ ಉಪ ಕಲಂ (2) ರ ಖಂಡ (ಎ) ರಲ್ಲಿ ಅಗತ್ಯಪಡಿಸಿರುವಂತೆ ಈ ಮೂಲಕ ಪ್ರಕಟಿಸಿದೆ. ಹಾಗೂ ಸದರಿ ಕರಡು ತಿದ್ದುಪಡಿ ನಿಯಮಗಳನ್ನು, ಅವುಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಸದರಿ ಕರಡು ತಿದ್ದುಪಡಿ ನಿಯಮಗಳ ಕುರಿತಂತೆ ಯಾವುದೇ ವ್ಯಕ್ತಿಯಿಂದ ನಿಗಧಿತ ಅವಧಿಯೊಳಗೆ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್. ಅಂಬೇಡ್ಕ‌ರ್ ವೀದಿ, ಬೆಂಗಳೂರು - 560 001 ಇವರ ವಿಳಾಸಕ್ಕೆ ಕಳುಹಿಸತಕ್ಕದ್ದು.

ಕರಡು ನಿಯಮಗಳು

1.ಶೀರ್ಷಿಕೆ ಮತ್ತು ಪ್ರಾರಂಭ: (1) ಈ ನಿಯಮಗಳನ್ನು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಯಾಗತಕ್ಕದ್ದು.

2. ಕೋಷ್ಟಕದ ತಿದ್ದುಪಡಿ: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967ರ ಕೋಷ್ಟಕದಲ್ಲಿ "ಶ್ರೇಣಿ ॥ ಪತ್ರಾಂಕಿತವಲ್ಲದ ಹುದ್ದೆಗಳು" ಶೀರ್ಷಿಕೆಯಡಿಯಲ್ಲಿ ಕ್ರಮ ಸಂಖ್ಯೆ: 66 ರಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರು ತರಗತಿ 1 ರಿಂದ 5 ವರ್ಗದ ಅಂಕಣ ಸಂಖ್ಯೆ (3) ರಲ್ಲಿ:-

1) ಪ್ರಸ್ತುತ ಇರುವ ಟಿಪ್ಪಣಿಯನ್ನು ಟಿಪ್ಪಣಿ-1 ಎಂದು ಸಂಖ್ಯಿಕರಿಸುವುದು: ಮತ್ತು 

2) ಅದರಂತೆ ಸಂಖ್ಯೆಕರಿಸಿದ ಟಿಪ್ಪಣಿ-1ರ ನಂತರ ಈ ಕೆಳಗಿನಂತೆ ಸೇರ್ಪಡೆಗೊಳಿಸತಕ್ಕದ್ದು. ಅಂದರೆ,
"ಟಿಪ್ಪಣಿ-2 - 1 ರಿಂದ 5ನೇ ತರಗತಿಗೆ ಬೋಧಿಸುವ ಪ್ರಾಥಮಿಕ ಶಾಲಾ ಶಿಕ್ಷಕರು NCTE ಮಾರ್ಗಸೂಚಿಗಳಲ್ಲಿ ನಿರ್ಧಿಷ್ಟಪಡಿಸಿದಂತೆ ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿರುವಂತೆ ಅಗತ್ಯ ವಿಷಯಗಳಲ್ಲಿ ಪದವಿಯನ್ನು ಹಾಗೂ TET ಪ್ರಮಾಣ ಪತ್ರವನ್ನು ಹೊಂದಿದ್ದಲ್ಲಿ 6 ಮತ್ತು 7 ನೇ ತರಗತಿಗೆ ಬೋಧಿಸಲು ಅರ್ಹರಾಗತಕ್ಕದ್ದು."



logoblog

Thanks for reading DRAFT RULES: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025 ಕರಡು ನಿಯಮಗಳ ಅಧಿಸೂಚನೆ ಪ್ರಕಟ.

Previous
« Prev Post