ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (KASS) ಅನುಷ್ಠಾನಕ್ಕಾಗಿ ಆಸ್ಪತ್ರೆಗಳನ್ನು ನೋಂದಾವಣೆಗೊಳಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಪ್ರತ್ಯಾಯೋಜಿಸುವ ಬಗ್ಗೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ' (KASS) ಅನುಷ್ಠಾನಕ್ಕಾಗಿ ಆಸ್ಪತ್ರೆಗಳನ್ನು ನೋಂದಾವಣೆಗೊಳಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಪ್ರತ್ಯಾಯೋಜಿಸುವ ಬಗ್ಗೆ.
ಪ್ರಸ್ತಾವನೆ:
ಮೇಲೆ ಓದಲಾದ ಕ್ರಮಾಂಕ (1) ರ ಆದೇಶದಲ್ಲಿ ನೂತನ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)" ಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, (SAST) ಬೆಂಗಳೂರು ಈ ಸಂಸ್ಥೆಯ ಮುಖಾಂತರ ಅನುಷ್ಠಾನಗೊಳಿಸಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (2) ರ ಆದೇಶದಲ್ಲಿ ರ ಕಂಡಿಕೆ-7 ರಲ್ಲಿ ಸದರಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸುವ ಖಾಸಗಿ ಆಸ್ಪತ್ರೆಗಳನ್ನು ಯೋಜನೆಯಡಿ ನೊಂದಾಯಿಸಿ ಅಧಿಸೂಚಿಸುವ ಕಾರ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದಲೇ ಕೈಗೊಳ್ಳತಕ್ಕದ್ದು ಎಂದು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3) ರ ಅಧಿಸೂಚನೆಗಳಲ್ಲಿ "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)" ಯೋಜನೆಯಡಿ ಕ್ರಮವಾಗಿ 186 ಮತ್ತು 70 ಖಾಸಗಿ ಆಸ್ಪತ್ರೆಗಳನ್ನು ನೊಂದಾವಣೆಗೊಳಿಸಿ ಆದೇಶಿಸಲಾಗಿದೆ.
ಸದರಿ ಯೋಜನೆಯಡಿ ನೊಂದಾವಣೆಗೊಳ್ಳಲು ಇಚ್ಛೆ ವ್ಯಕ್ತಪಡಿಸುವ ಖಾಸಗಿ ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯ ಹಾಗೂ ಇತರೆ ಮಾನದಂಡಗಳನ್ನು ಪರಿಶೀಲಿಸಿಕೊಂಡು ಆಸ್ಪತ್ರೆಗಳನ್ನು ಅಧಿಸೂಚಿಸಲು ಪ್ರಸ್ತುತ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್‌ಟ್‌ನಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗತ್ತಿದ್ದು, ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ತ್ವರಿತವಾಗಿ ಯೋಜನೆಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಸದರಿ ಯೋಜನೆಯಡಿ ಆಸ್ಪತ್ರೆಗಳನ್ನು ನೊಂದಾವಣೆಗೊಳಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಪ್ರತ್ಯಾಯೋಜಿಸಲು ತೀರ್ಮಾನಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಆಕುಕ 223 ಸಿಜಿಇ 2025 ಬೆಂಗಳೂರು, ದಿನಾಂಕ: 29.10.2025
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ' (KASS) ನೊಂದಾವಣೆಗೊಳ್ಳಲು ಇಚ್ಛೆ ವ್ಯಕ್ತಪಡಿಸುವ ಖಾಸಗಿ ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯ ಹಾಗೂ ಇತರೆ ಮಾನದಂಡಗಳನ್ನು ಪರಿಶೀಲಿಸಿಕೊಂಡು ಆಸ್ಪತ್ರೆಗಳನ್ನು ನೊಂದಾವಣೆಗೊಳಿಸಿ ಅಧಿಸೂಚಿಸುವ ಅಧಿಕಾರವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್‌ಟ್‌ಗೆ ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.