1. ಕರ್ನಾಟಕದಾದ್ಯಂತ ಸರ್ಕಾರಿ ಶಾಲೆಗಳಿಗೆ ಒಟ್ಟು 26,000 ಶಿಕ್ಷಕರ ನೇಮಕಾತಿ ಮಾಡಲು ಸರ್ಕಾರ ನಿರ್ಧರಿಸಿದೆ.
2. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಅವಕಾಶ ನೀಡಲಾಗಿದೆ.
3. ಡಿಸೆಂಬರ್ 7ರಂದು ಟಿಇಟಿ (TET) ಪರೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
4. ಶೀಘ್ರದಲ್ಲೇ ಅನುದಾನಿತ ಶಾಲೆಗಳಿಗೂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.
5. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳು ಪ್ರಾರಂಭವಾಗುತ್ತಿವೆ; 6ನೇ ತರಗತಿಯಿಂದ ಇಂಗ್ಲಿಷ್ & ಸ್ಕಿಲ್ ಸ್ಕೂಲ್ ಶಿಕ್ಷಣ ಆರಂಭವಾಗಲಿದೆ.
6. 3,000 ಕೋಟಿ ರೂ. ಬಜೆಟ್ ಮೀಸಲಿಟ್ಟು, AI ಆಧಾರಿತ ಶಿಕ್ಷಣ ಹಾಗೂ ಕಂಪ್ಯೂಟರ್ ಪಾಠವನ್ನು ಮೊದಲ ತರಗತಿಯಿಂದಲೇ ಪ್ರಾರಂಭಿಸಲಾಗುತ್ತಿದೆ.