Teacher Transfer-2024-25 ನೇ ಸಾಲಿನ ವರ್ಗಾವಣೆಯಲ್ಲಿ ಸ್ಥಳ ಆಯ್ಕೆ ಮಾಡಿಕೊಂಡಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ.
2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಯಲ್ಲಿ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆಗೊಂಡ ಶಿಕ್ಷಕರನ್ನು ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ಅವಧಿ ಮುಗಿದ ನಂತರ ಬಿಡುಗಡೆಗೊಳಿಸುವ ಬಗ್ಗೆ:
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಸ್ಥಳನಿಯುಕ್ತಿಗೊಳಿಸಲಾಗಿದೆ.
ಪರಸರ ವರ್ಗಾವಣೆಗೊಂಡ ಶಿಕ್ಷಕರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸುವುದು ಮತ್ತು ವರ್ಗಾವಣೆಯಾಗಿ ಬಂದ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಳ್ಳುವುದು.
ಪರಸ್ಪರ ವರ್ಗಾವಣೆಗೊಂಡ ಶಿಕ್ಷಕರನ್ನು ಹೊರತುಪಡಿಸಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮತ್ತು ಪರೀಕ್ಷೆಯಲ್ಲಿ ಫಲಿತಾಂಶವನ್ನು ಉತ್ತಮಗೊಳಿಸುವಿಕೆಯ ಉದ್ದೇಶದಿಂದ ಕೌನ್ಸಿಲಿಂಗ್ ಮೂಲಕ ಕೋರಿಕೆ ವರ್ಗಾವಣೆಯಾಗುವ ಎಲ್ಲಾ ಶಿಕ್ಷಕರನ್ನು ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅದೇ ಶಾಲೆಯ ಆದೇ ಹುದ್ದೆಯಲ್ಲಿ ಮುಂದುವರೆಸುವುದು ಹಾಗೂ ದಿನಾಂಕ: 09/04/2026 ರಂದು ಮೂಲ ಕರ್ತವ್ಯನಿರತ ಹುದ್ದೆ/ಶಾಲೆಯಿಂದ ಬಿಡುಗಡೆಗೊಳಿಸುವುದು ಮತ್ತು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಿಕ್ಷಿಕರುಗಳು ದಿನಾಂಕ: 10/04/2026 ರಂದು ವರ್ಗಾಯಿತ ಹುದ್ದೆಯ/ಶಾಲೆಯ ಕರ್ತವ್ಯದಲ್ಲಿ ಕಡ್ಡಾಯವಾಗಿ ಹಾಜರಾಗತಟ್ಟಿದ್ದು ಈ ಕುರಿತು ಎಲ್ಲಾ ಸಕ್ಷಮ ವರ್ಗಾವಣಾ ಪ್ರಾಧಿಕಾರಿಗಳು ಅಗತ್ಯ ಕ್ರಮವಹಿಸಲು ತಿಳಿಸಿದೆ ಈ ಕುರಿತು ಅಧಿಕೃತ ಜ್ಞಾಪನ.
